Skip to main content

ಬೇರಿನ‌ ಅರಿವು

ಪರಿಸರದ ಉಳಿವಿಗೆ  ಬೇರಿನ ಅರಿವು.

ಮಾನವ ಪರಿಸರ ಸ್ನೇಹಿಯಾಗದ ಹೊರತು ಪರಿಸರ ಮಾನವನನ್ನು ಪ್ರೀತಿಸುವುದಿಲ್ಲ.
‌ಪ್ರತಿಯೊಬ್ಬ ಮನುಷ್ಯನಿಗೂ ಪರಿಸರ ರಕ್ಷಣೆ ಮಾಡಬೇಕೆಂಬ ವಾಕ್ಯ ತಿಳಿದಿದೆ.  ಆದರೆ ಅದನ್ನು ಅನುಸರಿಸುವ ಜನ ವಿರಳ. ಮರದ ಬೇರುಗಳ ಬಗ್ಗೆ ಒಂದಷ್ಟು ಮಾಹಿತಿಗಳ ಅರಿವು ಇದ್ದರೆ ಪರಿಸರ ಸಂರಕ್ಷಣೆ ಸುಲಭ.

ಕೆಲವು ಮರಗಳ ಕುರಿತಾಗಿ ಅಧ್ಯಯನ ಮಾಡಿದಾಗ ತಿಳಿದು ಬಂದ ವಿಷಯಗಳು ಎನೆಂದರೆ ಮರದ ಬೇರುಗಳು ಬಲವಾಗಿಲ್ಲ ಎಂಬುದು. ಎಲೆಗೊಂದರಂತೆ ಬೇರುಗಳಿರಬೇಕು. ಮರ ಎಷ್ಟು ಎತ್ತರವಿದೆಯೋ ಅದರಷ್ಟು ಆಳದವರೆಗೆ ಬೇರು ಹರಡಿರ ಬೇಕು. ಆದರೆ ಮಾನವನ ಆಧುನಿಕತೆಯ ಪರಿಣಾಮವಾಗಿ ರಸ್ತೆ, ಕಟ್ಟಡಗಳ ನಿರ್ಮಾಣಕ್ಕಾಗಿ ಮತ್ತು ಚರಂಡಿ ನಿರ್ಮಾಣಕ್ಕಾಗಿ ಮರವನ್ನು ಕತ್ತರಿಸುವುದರೊಟ್ಟಿಗೆ ಸಮೀಪವಿರುವ ಮರದ ಬೇರುಗಳನ್ನು ಕತ್ತರಿಸಲಾಗುತ್ತಿದೆ. ಇದರಿಂದ ಸಣ್ಣ ಗಾಳಿ, ಮಳೆ ಬಂದರೂ ಸಹ ಮರಗಳು ಧರೆಗೆ ಉರುಳುವ ಘಟನೆ ಹೆಚ್ಚಾಗಿದೆ.

ಅಕೇಶಿಯ ಮತ್ತು ನೀಲಗಿರಿ ಮರಗಳು ಇರುವ ಕಡೆಯಲ್ಲಿ ಬೇರೆ ಮರಗಳು ಬೆಳೆಯುವುದಿಲ್ಲ. ಮತ್ತು ಮಣ್ಣಿನ ಗುಣಮಟ್ಟದ ಕೊರತೆ ಉಂಟಾಗುತ್ತದೆ. ಈ ವಿಷಯ ಅಧ್ಯಯನದ ಮೂಲಕ ಸಾಬೀತಾಗಿದೆ. ಕೆಲವೆಡೆ ಇಂತಹ ಮರಗಳನ್ನು ಬೇರು ಸಮೇತವಾಗಿ ಕಿತ್ತು ಹಾಕಲಾಗಿದೆ. ಮರಗಳಿಗೂ ಮಾನನವನಿಗೆ ಬಂದಂತೆ ಹಲವಾರು ಕಾಯಿಲೆಗಳು ಬಾದೆಗಳು ಎದುರಾಗುತ್ತವೆ. ಭೂಮಿಯ ಸುರಕ್ಷೆಗಾಗಿ ಮತ್ತು ಮರದ ಉಳಿವಿಗಾಗಿ ಸಂರಕ್ಷಿತ ಅರಣ್ಯ ಪ್ರದೇಶಗಳನ್ನು ಇಟ್ಟು ಕಾಪಾಡಿಕೊಳ್ಳುವ ಸ್ಥಿತಿ ಎದುರಾಗಿರುವುದು ಖೇದಕರ ಸಂಗತಿ.

ಮತ್ತೊಂದು ಗಮನಾರ್ಹ ಸಂಗತಿ ಎಂದರೆ ಬೇರುಗಳು ಯಾವತ್ತೂ ಜೀವಂತವಿರುವುದಿಲ್ಲ ಅವು ಆಗಾಗ ಸತ್ತು ಮಣ್ಣಿನಾಳದಲ್ಲಿ ಹುಟ್ಟುತ್ತಿರುತ್ತವೆ. ಇದರಿಂದ ಮಣ್ಣಿನ ಫಲವತ್ತತೆ ಇನ್ನು ಹೆಚ್ಚುತ್ತದೆ.  ತಾಯಿ ಬೇರು ಮತ್ತು ತಂತು ಬೇರುಗಳ ಕುರಿತು ಸಾಮಾನ್ಯ ಜ್ಞಾನ ನೀಡುವ ಕೆಲಸವನ್ನು  ಪ್ರಾಥಮಿಕ ಶಾಲೆಯಿಂದಲೇ ಮಾಡಲಾಗಿದೆ. ಕಲಿಕೆಯ ಭಾಗವಾಗಿ ಪರಿಸರ ಅಧ್ಯಯನ ಎಂಬ ವಿಷಯಾಧಾರಿತ ಪಠ್ಯವನ್ನು ನೀಡಿದ್ದಾರೆ.
 
ಮರಗಳು ಎಲೆಯಿಂದ ತಮ್ಮ ಆಹಾರವನ್ನು ದ್ಯುತಿಸಂಶ್ಲೇಷಣೆ ಮೂಲಕ ತಯಾರಿಸಿಕೊಳ್ಳುತ್ತವೆ. ಮತ್ತು ತಮಗೆ ಬೇಕಾದ ಪೋಷಕಾಂಶಗಳನ್ನು ಬೇರಿನಿಂದ ಪಡೆದು ಕೊಳ್ಳುತ್ತವೆ. ಎಲ್ಲಾ ಮರಗಳು ಒಂದೇ ತರದ ಅಂಶಗಳನ್ನು ಎಳೆದುಕೊಳ್ಳುವುದಿಲ್ಲ. ಆದರೆ 'ಟ್ರಾನ್ಸ್ ಮ್ಯುಟೇಶನ್' ಎಂದು ಕರೆಯಲ್ಪಡುವ ಒಂದು ಕ್ರಿಯೆಯ ಮೂಲಕ ತನಗೆ ಬೇಕಾದ ಪೋಷಕಾಂಶಗಳನ್ನು ಸೃಷ್ಟಿಸಿಕೊಳ್ಳುವ ತಾಕತ್ತು ಮರಗಳಗಿರುತ್ತದೆ.

ಪರಿಸರ ಸಂರಕ್ಷಣೆ ಮಾಡಲು ಇಚ್ಚಿಸುವವರು ಮತ್ತು ಗಿಡಗಳನ್ನು ಬೆಳೆಸುವವರು ಒಂದು ಗಿಡದಿಂದ ಇನ್ನೊಂದು ಗಿಡದ ನಡುವೆ ಇಡಬೇಕಾದ ಅಂತರಗಳ ಕುರಿತು ಗಮನಹರಿಸಬೇಕು. ಏಕೆಂದರೆ ಒತ್ತೊತ್ತಾಗಿ ಗಿಡ ನೆಟ್ಟರೆ ಮರವಾಗುವ ಸಂಧರ್ಭದಲ್ಲಿ ಬೇರುಗಳು ಹರಡಿಕೊಳ್ಳು ಸ್ಥಳದ ಅಭಾವ ಉಂಟಾಗುತ್ತದೆ. ಇದರಿಂದ ಮರದ ದೃಢತೆ ಕ್ಷೀಣಿಸುತ್ತದೆ. ಬೇರುಗಳ ಕುರಿತು ಇಷ್ಟಾದರೂ ಅರಿವಿದ್ದರೆ ಪರಿಸರದ ಉಳಿವು ಸಾಧ್ಯ.

ಸುಮಾ.ಕಂಚೀಪಾಲ್



Comments

Post a Comment

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...