Skip to main content

ಪ್ರವಾಸೋದ್ಯಮ ಏಕೆ ಹೀಗೆ?

ಪ್ರವಾಸೋದ್ಯಮ ಏಕೆ ಹೀಗೆ ?

ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಹಲವಾರು ಪ್ರವಾಸಿ ಕೇಂದ್ರಗಳಿವೆ. ಪ್ರಸಿದ್ದ ಬನಗಳವೆ , ಕೋಟೆಗಳಿವೆ ದೇವಾಲಯಗಳಿವೆ ಸುಂದರ ಸೊಬಗಿನ ನಾಡು ನಮ್ಮ ಕರುನಾಡು. ಇಲ್ಲಿ ನಾನು ಹೇಳಲು ಹೊರಟಿರುವುದು ಇದೆ ಸುಂದರ ತಾಣಗಳ ಕುರಿತಾಗಿ ಪ್ರತಿಯೊಬ್ಬರೂ ಪ್ರವಾಸ ಪ್ರಿಯರೇ, ಇಂದಿನ ಯುವ ಜನತೆಯಂತೂ ಹಿಂದಿಗಿಂತ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಂದಾಗಿ ಪ್ರವಾಸದ ಕುರಿತು ಹೆಚ್ಚಿಗಿನ ಆಸಕ್ತಿ ತೋರುತ್ತಿದ್ದಾರೆ.

ಮನರಂಜನೆಗಾಗಿ ಮೋಜು ಮಸ್ತಿಗಳಿಗಾಗಿ ಸಂತೋಷಕ್ಕಾಗಿ ಪ್ರವಾಸಕ್ಕೆ ಹೋಗುವುದು ಒಂದು ರೂಢಿಯಾಗಿದೆ . ಆದ್ಧರಿಂದ ಒಬ್ಬರಿಂದ ಮತ್ತೊಬ್ಬರಿಗೆ ಜಾಗಗಳ ಪರಿಚಯ ಬಹುಬೇಗ ಆಗಿಬಿಡುತ್ತೆ. ತಮ್ಮದೇ ಆದ ಕೆಲವು ಗುಂಪುಗಳನ್ನು ಹೊಂದಿ ಸದಾ ಸುತ್ತಾಟದಲ್ಲಿ ಮುಳುಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ ಮಾಡುವುದು ಸರ್ವೇ ಸಾಮಾನ್ಯವಾಗಿದೆ‌. ಹೀಗಿರುವಾಗ ಅದಕ್ಕೆ ಪೂರಕವಾಗಿ ಸಾರ್ವಜನಿಕ ಸಂಸ್ಥೆಗಳು ಹುಟ್ಟಿಕೊಂಡು ಉದ್ಯಮವಾಗಿ ಬಿಟ್ಟಿದೆ. ಇದು ಪರಿಸರಕ್ಕೆ ಕುತ್ತು ತರುತ್ತಿದೆ.

24 September 2019 ಕಡಲವಾಣಿ.

ಇಂತ ಪ್ರವಾಸೋದ್ಯಮವು ಬದಲಾಗಬೇಕಾಗಿದೆ.

ಪ್ರವಾಸಿ ಮಂದಿರಗಳ ಸದ್ಬಳಕೆ ಮತ್ತು ಬರುವ ಜನರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಿದರೆ ನಮ್ಮ ಸರ್ಕಾರವು ಪ್ರಯೋಜನ ಪಡೆದುಕೊಂಡು ಆ ದುಡ್ಡಿನಿಂದ ಜನತೆಗೆ ಸಹಾಯ ಮಾಡಬಹುದು.

ಸಿಂಗಾಪುರದಂತ ಪಟ್ಟಣಗಳು ಇಂದು ಪ್ರವಾಸೋದ್ಯಮ ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುಧಾರಣೆಯನ್ನು ಕಂಡುಕೊಂಡಿದೆ. ಹಾಗೆಯೇ ಅಮೇರಿಕದಲ್ಲಿ ನಯಾಗರ ಜಲಪಾತದ ಸಮೀಪ ವಿಮಾನ ನಿಲ್ದಾಣ ನಿರ್ಮಿಸುವುದರ ಮೂಲಕ ಜಾಗದ ಉಳಿತಾಯ ಮಾಡಿ ಒಂದು ಹೊಸ ರೂಪದ ವಿಮಾನ ನಿಲ್ದಾಣ ಮಾದರಿಯಾಗಿದೆ.

ಹಾಗೆ ನಮ್ಮ ಕರ್ನಾಟಕದಲ್ಲೂ ನಾವು ಪ್ರಯೋಜನ ಪಡೆದುಕೊಳ್ಳಬಹುದಿತ್ತು. ಎಷ್ಟೋ ಪ್ರವಾಸಿ ತಾಣಗಳಲ್ಲಿ ಸರಕಾರಿ ಅತಿಥಿ ಗೃಹ ನಿರ್ಮಾಣ ಮಾಡಿ ಕಡಿಮೆ ದರದಲ್ಲಿ ಪ್ರವಾಸಿಗಳಿಗೆ ನೀಡಿದಲ್ಲಿ ಅದರ ಪ್ರಯೋಜನವನ್ನು ಪಡೆದುಕೊಳ್ಳಬಹುದಿತ್ತು. ಅದರಿಂದ ಪ್ರವಾಸಿಗರಿಗೂ ಸಹಾಯವಾಗುತ್ತಿತ್ತು‌. ಈ ನಿಟ್ಟಿನಲ್ಲಿ ಒಳ್ಳೆಯ ಯೋಜನೆಗಳು ಜಾರಿಗೆ ಬರಬೇಕು ಬದಲಾವಣೆಗಳು

ಬೆಳವಣಿಗೆಯದ್ದಾಗಿರಬೇಕು : ಜಲಪಾತ ದೇವಾಲಯಗಳನ್ನು ನೋಡಿ ಆನಂದಿಸುವುದರೊಟ್ಟಿಗೆ  ಮುಂದಿನ ಪೀಳಿಗೆಗೆ ಅದನ್ನು ತಲುಪಿಸುವ ಉದ್ದೇಶವಿರಬೇಕು. ಅಲ್ಲಿನ ಸಮಸ್ಯೆಯ ಕುರಿತ ಅಧ್ಯಯನ ಮಾಡಿ ಪ್ರಗತಿಯ ಹಾದಿಯಲ್ಲಿ ಪ್ರವಾಸಗರು ಗಮನಹರಿಸಬೇಕು ಇಂತಹ ವಿಷಯಗಳ ಕುರಿತ ಆಸಕ್ತಿ ಹೊಂದಿದವರು ಕಡಿಮೆ ಇದ್ದಿರಬಹುದು ಆದರೆ ಇಂತವರು ಇಲ್ಲವೇ ಇಲ್ಲ ಎಂಬಂತಿಲ್ಲ.

ಪರಿಸರದ ಪವಿತ್ರ ತೆ ಕಾಪಾಡಬೇಕು. ಕಸ ಚೆಲ್ಲುವುದು ಸ್ಮಾರಕಗಳನ್ನು ಹಾಳು ಮಾಡುವುದು ಕಾಡಿನಲ್ಲಿ ಗುಡ್ಡಗಳಲ್ಲಿ ಓಡಾಡುವುದು ಪ್ರಾಣಿಗಳ ಶಾಂತಿಗೆ ಧಕ್ಕೆ ತರುವ ಕೆಲಸಗಳನ್ನು ಮಾಡಬಾರದು. ಪ್ರವಾಸೋದ್ಯಮ ಪ್ರಗತಿಪರವಾಗಲಿ ಪ್ರವಾಸಿಗರಲ್ಲು ಇದು ನಮ್ಮದು ಎಂಬ ಮನೋಭಾವ ಇರಲಿ.

ಸುಮಾ.ಕಂಚೀಪಾಲ್

Comments

Popular posts from this blog

ಮೆಜೆಸ್ಟಿಕ್

ನಾನು ಇವನು ಹೈದರಾಬಾದ್‌ಗೆ ಹೋಗೋದು ಅಂತ ನಿರ್ಧಾರ ಮಾಡಿ ಮನೆಯಲ್ಲೇ ಊಟ ಮುಗಿಸಿ ಹೊರಟೆವು. ಕುವೆಂಪು ಮೆಟ್ರೋ ಸ್ಟೇಷನ್‌ನಿಂದ ಸೀದಾ ಬಂದು ಇಳಿದದ್ದು ಮೆಜೆಸ್ಟಿಕ್‌ಗೆ. ನಾನು ಸ್ವಲ್ಪ ಕತ್ತಲಾಗಿ ಬೀದಿ ದೀಪಗಳು ಉರಿಯಲು ಶುರುವಾದರೆ ಸಾಕು ಹೆದರಿ ಸಾಯುತ್ತೇನೆ. ನನ್ನನ್ನು ಸಮಾಧಾನ ಮಾಡಿ ಬ್ಯಾಗಿನ ಜೊತೆ ಕೈ ಹಿಡಿದು ಬೇರೆ ಊರು ತಲುಪುವುದು ಎಂದರೆ ಇವನಿಗೆಷ್ಟು ಕಷ್ಟ ಇರಬಹುದು ಎಂದು ನಾನು ಆಗಾಗ ಯೋಚಿಸುತ್ತೇನೆ. ಆದರೂ ನಮಗೇನಾದ್ರೂ ಆದ್ರೆ? ಕಳ್ಳ ಬಂದ್ರೆ? ನಾನು ಕಳೆದೇ ಹೋದ್ರೆ ಎಂದು ಏನೇನೋ ಮಳ್ಳು ಹಲುಬುತ್ತ ಸಾಗುತ್ತೇನೆ. ಇವನಿಗೆ ಇರುವಷ್ಟು ಸಹನೆ ಯಾರಿಗೂ ಇಲ್ಲ, ಅದಂತೂ ನಿಜ ಎಂದು ನನಗೆ ನಾನೇ ಹಲುಬಿಕೊಂಡು ಅವನ ಹಿಂದೆ ಸಾಗುತ್ತೇನೆ.  ಚಿತ್ರ: ಮೆಜೆಸ್ಟಿಕ್ ಪ್ಲಾಟ್‌ಫಾ ರ್ಮ್ ನಂಬರ್ 16 ಕೆಂಪು, ಬಿಳಿ, ನೀಲಿ ಬಸ್ಸುಗಳ ಸಾಲು. ಏ ಇಲ್ ನೋಡೇ, ಹಿಂದಿನ ಸಲ ನಾವು ಬಸ್ ಹತ್ತಿದ್ದು ಇಲ್ಲೆಯ ನೆನಪಿದ್ದಾ ನಿನಗೆ? ಎಂದು ಉಮೇದಿಯಿಂದ ಇವ ಒಂಚೂರು ನನ್ನ ಕೈ ಬಿಟ್ಟು ಮುಂದೆ ಸಾಗಿದರೆ ನಾನು ನಿಂತಲ್ಲೇ ಬಾಕಿ. ಯಾಕೆಂದು ನನಗೂ ಗೊತ್ತಿಲ್ಲ. ಆಮೇಲೆ ನನ್ನಿಂದ ಉತ್ತರ ಬರದೇ ಇದ್ದಾಗ ಅವ ಮತ್ತೆ ತಲೆಮೇಲೆ ಕೈ ಹೊತ್ತು ನಾನಿದ್ದಲ್ಲಿ ಬರುತ್ತಾನೆ.  ಅವನಿಗೆ ಎಲ್ಲ ಜನರನ್ನು, ಎಲ್ಲ ಊರುಗಳ ಹೆಸರನ್ನು ಹಾಗೇ ಕೆ. ಆರ್ ಮಾರ್ಕೇಟಿಗೆ ಹೋಗಲು ಬಂದಿಳಿದ ಫ್ರೆಷ್ ಪುದಿನಾ ಎಲೆಗಳ ಗಂಟನ್ನೂ; ಎಲ್ಲವನ್ನೂ ಮಾತಾಡಿಸಬೇಕು. ನನಗೆ ಜನರನ್ನ...

ಎಲ್ಲರಲ್ಲೂ ಒಬ್ಬ ಕಳ್ಳ ಇದ್ದಾನೆ

ಎಲ್ಲರೊಳಗೂ ಒಬ್ಬ ಕಳ್ಳ ಇದ್ದಾನೆ ಒಂದು ಸಿನೆಮಾ ನೋಡುತ್ತೇವೆ ಎಂದಾದರೆ ಅದರ ಬಗ್ಗೆ ಒಂದಿಷ್ಟಾದರೂ ತಿಳಿದುಕೊಂಡೇ ಹೋಗುತ್ತೇವೆ. ಅದು ಇದು ಮಾತಾಡಿಕೊಂಡು ನಾವೇ ಒಂದು ನಿರ್ಧಾರ ಮಾಡಿಕೊಂಡು ಹಾ, ಈ ಸಿನಿಮಾ ಹೀಗಿರಬಹುದು ಎಂದು ಊಹಿಸಿಕೊಳ್ಳುತ್ತೇವೆ. ಆ ಪೂರ್ವಾಗ್ರಹವನ್ನು ಬದಲಿಸಿಬಿಡುವಂತಹ ಒಂದು ಸಿನಿಮಾಕ್ಕೆ ಇನ್ನೊಂದು ಹೆಸರೇ 'ಕೋಟಿ'. ಕೆಲವರು ಡಾಲಿ ಧನಂಜಯ್, ಇನ್ನು ಕೆಲವರು ಪರಂ  ಹೆಸರು ಕೇಳಿಯೇ ಈ ಸಿನಿಮಾ ನೋಡಲು‌ ನಿಶ್ಚಯಿಸಲು ನಿರ್ಧರಿಸಿರಬಹುದು. ಹಾಗೆ ಹೋಗುವುದು ಕೂಡ ಒಂದು ಮಟ್ಟಿಗೆ ಸರಿಯೇ. ನಾನಂತೂ ಕೋಟಿ ಸಿನಿಮಾವನ್ನು ಥಿಯೇಟರ್‌‌ನಲ್ಲೇ ನೋಡಲು ನಮ್ಮೂರಿನವರೇ ಆದ ಪರಮೇಶ್ವರ್​ ಗುಂಡ್ಕಲ್ ನಿರ್ದೇಶನವೇ ಕಾರಣ ಅನ್ನೋದು ಮುಚ್ಚುಮರೆ ಇಲ್ಲದ ಸತ್ಯ. ಈಗಂತೂ ಹಲವರು "ಬಿಡು, ಓಟಿಟಿಗೆ ಬಂದ ಮೇಲೆ ನೋಡಿದರಾಯ್ತು" ಎಂದು ಸುಮ್ಮನಾಗುತ್ತಾರೆ. ಕೆಲವು ಸಿನಿಮಾಗಳನ್ನು ನಾನು ಕೂಡ ಓಟಿಟಿಗೆ ಎಂದೇ ಮೀಸಲಿಡುತ್ತೇನೆ. ಆದರೆ ಈ ಚಿತ್ರ ನನಗೆ ಚೂರು ವಿಶೇಷವಾಗಿತ್ತು. ಚೂರು ಅಂದ್ರೇ ಚೂರೇ, ಹೆಚ್ಚೇನೂ ಇಲ್ಲ. ಹೌದು, ಆಮೇಲೆ ನಾನು ಇದನ್ನು ಅವರಿಗಾಗಿ ಅವರನ್ನು ಹೊಗಳುವುದಕ್ಕಾಗಿ ಬರೆಯುತ್ತಾ ಇದ್ದೇನೆ ಎಂದು ನೀವು ಅಂದುಕೊಳ್ಳಬಹುದು. ಆ ಅನಿವಾರ್ಯತೆಗಳೇನೂ ಸದ್ಯಕ್ಕಿಲ್ಲ. ಸಿನಿಮಾ ನೋಡುವ ಮುನ್ನ ಕೆಲವರ ಬಾಯಲ್ಲಿ ಒಂದು ವಿಷಯವನ್ನು ಕೇಳಿ ಹೌದಾಗಿರಬಹುದು ಎಂದುಕೊಂಡಿದ್ದೆ. 'ಸಿನಿಮಾ ಸುಮಾರಾಗೇ ಇದೆ. ಆದ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...