Skip to main content

ಕಂಚಿ ಮಾರುಕಟ್ಟೆ ಉತ್ಸವ

ಕಂಚಿ ಮಾರುಕಟ್ಟೆ ಉತ್ಸವ 

ಎತ್ತನೋಡಿದರು ಬೆಳಕಿನ ಸರಮಾಲೆ, ಸಹಸ್ರಾರು ಭಕ್ತರು, ನಾನಾ ರೀತಿಯ ಹೂವುಗಳಿಂದ ಅಲಂಕೃತಗೊಂಡ ದೇವಾಲಯದ ಮುಖ್ಯದ್ವಾರ ಮತ್ತು ಪುಷ್ಪಗಳಿಂದಲೇ ನಿರ್ಮಾಣವಾದ ಶಿವಲಿಂಗ ಇವೆಲ್ಲವೂ ಧರ್ಮಸ್ಥಳ ಲಕ್ಷದೀಪೋತ್ಸವದ ನಾಲ್ಕನೇ ದಿನದ ವಿಶೇಷ ನೋಟಕನ್ನಡನಾಡಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ನಾಲ್ಕನೇ ದಿನ  ಧರ್ಮಸ್ಥಳೆಶನಿಗೆ ಕಂಚಿಮಾರುಕಟ್ಟೆ ಉತ್ಸವದ ವೈಭವ.   ದೇವಾಲಯದ ಪ್ರಾಂಗಣದಲ್ಲಿ ಪ್ರದಕ್ಷಿಣಾ ಪಥದಲ್ಲಿ  ಸ್ವರ್ಣಪಲ್ಲಕ್ಕಿಯಲ್ಲಿ  ಹದಿನಾರು ಸುತ್ತು ಸುತ್ತಿದ ಸ್ವಾಮಿಯ ಉತ್ಸವ ಮೂರ್ತಿ,  ನಂತರ ಬೆಳ್ಳಿಯ ನಂದಿ ಮಂಟಪದಲ್ಲಿ ರಥ ಬೀದಿಯ ಮೂಲಕ ಕಂಚಿ ಮಾರುಕಟ್ಟೆಗೆ ಹೊರಟಿತು. 

ದೇವಸ್ಥಾನದ ಆನೆ ಲತಾ, ಬಸವ ಗಿರೀಶ, ವಿವಿಧ ವಾದ್ಯಗಳು ಹಾಗೂ ಸಾವಿರಾರು ಭಕ್ತ ವೃಂದದೊಟ್ಟಿಗೆ ಸ್ವಾಮಿಯ ವಿರಾಜಮಾನನಮೂರ್ತಿ ಕಂಚಿ ಮಾರುಕಟ್ಟೆ ತಲುಪಿತು. ಕಂಚಿ‌ಮಾರುಕಟ್ಟೆ ತಲುಪಿದ ಮೇಲೆ ವಾಡಿಕೆಯ ವಿಧಿ ವಿಧಾನಗಳು ನೆರವೇರಿದವು. 

ಆರತಿ, ಪೂಜೆ, ವಾದ್ಯ ಸೇವೆ ನೆರವೇರಿದ ನಂತರ ಆರಾಧ್ಯ ಮೂರ್ತಿಯನ್ನು ದೇವಾಲಯಕ್ಕೆ ಕರೆತರಲಾಯಿತು. ದೇವಸ್ಥಾನದ ಹೊರವಲಯದಲ್ಲಿ ಬೆಳ್ಳಿಯ ರಥದಲ್ಲಿ ರಥೋತ್ಸವ ಸೇವೆಯ ಮೂಲಕ ಉತ್ಸವ ಸಂಪನ್ನಗೊಂಡಿತು. 

ಸುಮಾ.ಕಂಚೀಪಾಲ್

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...