ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ? ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...
ಭಗವಂತ ದಾರೀಲಿ ಸಿಕ್ರೆ ನಾವೇನ್ ಮಾಡಣಾ
ReplyDeleteಅವನಿಗೂ ಬಣ್ಣ ಹಚ್ಚಿ ಫೋಟೋ ತೆಗಿಯೋಣ.
ವಾ! ವಾ!
DeleteNice Suma Kanchipal
ReplyDeleteತ್ಯಾಂಕ್ಯೂ
Deleteಚಂದ ಚಂದ
ReplyDeletePhotography yaridu
ReplyDelete