ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು. ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು. ಆಮೇಲೆನೋ ಒಂದು ಮಾಡಿ ಆಯಿತು. ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು. ನಾವೇ ಆ ಮೂವರು "ಅನು, ನಿಧಿ...
ಭಗವಂತ ದಾರೀಲಿ ಸಿಕ್ರೆ ನಾವೇನ್ ಮಾಡಣಾ
ReplyDeleteಅವನಿಗೂ ಬಣ್ಣ ಹಚ್ಚಿ ಫೋಟೋ ತೆಗಿಯೋಣ.
ವಾ! ವಾ!
DeleteNice Suma Kanchipal
ReplyDeleteತ್ಯಾಂಕ್ಯೂ
Deleteಚಂದ ಚಂದ
ReplyDeletePhotography yaridu
ReplyDelete