ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...
Beautiful Photos Suma
ReplyDeleteಸುಂದರ ಛಾಯಾ ಚಿತ್ರಗಳು.
ReplyDeleteಪ್ರತಿ ಚಿತ್ರವೂ ಒಂದು ಅವ್ಯಕ್ತ ಭಾವವನ್ನು, ಹೇಳದೆ ಉಳಿದ ಹಲವು ಕಥೆಗಳನ್ನು ಒಂದು ಆಯಕಟ್ಟಿನಲ್ಲಿ ಸೇರಿಸಿದ ಹಾಗಿವೆ.
👏👏ಅಭಿನಂದನೆಗಳು ಅಕ್ಕಾ
Thank you brother
DeleteSuper 😍
ReplyDelete