Skip to main content

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ.

ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ.
ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ?
ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು.



ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತರ ಚಂದ.
ಮಳೆ ಅಂದ್ಮೇಲೆ ಉಂಬಳ ಇರ್ಲೆ ಬೇಕಲ್ವಾ? ಪೇಟೆ ನಿವಾಸಿಗರು ಅಥವಾ ಘಟ್ಟದ ಮೇಲಿನವರು ಅಂದ್ರೆ ಬಯಲುಸೀಮೆಯವರಿಗೆ ನೀರು ಕಾಣಲಿಕ್ಕೆ ಸಿಗೋದು ಪ್ರವಾಸಕ್ಕೆ ಅಂತ ಮಲೆನಾಡಿಗೆ ಬಂದಾಗ ಆಗ ಅವರಿಗೆ ಈ ಉಂಬಳಗಳ (ಜಿಗಣೆ) ಪರಿಚಯ ಆಗೋದು ಇದು ಹೆಚ್ಚಾಗಿ ನೀರಿರುವಂತಹ ಸ್ಥಳಗಳಲ್ಲಿ ಇರತ್ತೆ. ತುಂಬಾ ಜನ ಇದನ್ನ ನೋಡಿ ಹೆದರುತ್ತಾರೆ.

ಇಂಥ ಅನುಭವ ನಿಮಗೂ ಆಗಿದ್ಯಾ?
ನನ್ನ ಅಜ್ಜನ ಮನೆ ಇರೋದು ಒಂದು ಫಾಲ್ಸ್ ಹತ್ತಿರದಲ್ಲೇ ಅಲ್ಲಿ ತುಂಬಾ ಜನ ಪ್ರವಾಸಿಗರು ಬರ್ತಾ ಇರ್ತಾರೆ. ದಿನ ಅದೇ ಪರಿಸರವನ್ನ ನೋಡೋರಿಗೇ ಅದೇನು ವಿಶೇಷ ಅನ್ಸೋದಿಲ್ಲ ಆದ್ರೆ ಟೂರಿಸ್ಟ್ಸ್ ಬರುತ್ತಾರಲ್ಲ ಅವರ ಕಣ್ಣಲ್ಲಿ ಕಾಣೋ ಖುಷೀನ ಎಲ್ಲೂ ನೋಡಕ್ ಸಿಗಲ್ಲ.
ಮಳೆ ಅಂತ ಒಂದ್ ಶಬ್ದ ಕೇಳ್ದಾಗ ನಿಮ್ ತಲೇಲಿ ಎನೋಡುತ್ತೆ?

ಕಮೆಂಟ್ ಮಾಡಿ

- ಪ್ರಗತಿ ಭಟ್
bhatpragati2706@gmail.com
ನೀವು ಬರಿತೀರಾ?


Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...